ಕಾರ್ಕಳ: ಒಂದೂವರೆ ತಿಂಗಳ ಪ್ರಾಯದ ಹಸುಗೂಸೊಂದು ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ಅಬ್ದುಲ್ ಆಸೀಫ್ ಅವರ ಪುತ್ರ ಮೊಹಮ್ಮದ್ ಅಫ್ಲಾಲ್ ಮೃತಪಟ್ಟ ಮಗು.
ಏಪ್ರಿಲ್ 27ರಂದು ಬೆಳಗ್ಗಿನ ಜಾವ ಮಗುವಿನ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿತ್ತು. ತಕ್ಷಣ ಪೋಷಕರು ಮಗುವನ್ನು ಕಾರ್ಕಳದ ಟಿ.ಎಂ.ಎ. ಪೈ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಂದು ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮಗು ಕೊನೆಯುಸಿರೆಳೆದಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಚಿಕಿತ್ಸೆ ಫಲಿಸದೆ ಒಂದೂವರೆ ತಿಂಗಳ ಮಗು ಸಾವು





