ಕಾರ್ಕಳ : ಕುಕ್ಕುಜೆ ಗ್ರಾಮದ ದೊಂಡೆರಂಗಡಿ ಪೇಟೆಯಲ್ಲಿ ಸಂತೋಷ್ ಪೂಜಾರಿಯವರ ಅಂಗಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಅಶ್ವಿನ್ 1 ರೂಪಾಯಿಗೆ 70 ರೂಪಾಯಿ ಕೊಡುವುದಾಗಿ ಕೂಗುತ್ತಾ ಮಟ್ಕಾ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅಜೆಕಾರು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಹೇಶ್ ಟಿ. ಎಮ್. ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅಶ್ವಿನ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಜನರಿಂದ ಸಂಗ್ರಹಿಸಿದ ಹಣವನ್ನು ಸಂತೋಷ ಪೂಜಾರಿಯವರಿಗೆ ನೀಡುತ್ತಿದ್ದು ಅವರು ಆತನಿಗೆ 100 ರೂಪಾಯಿಗೆ 20 ರೂಪಾಯಿಯಂತೆ ಕಮಿಷನ್ ನೀಡುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿರುತ್ತದೆ.
ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪೊಲೀಸ್ ದಾಳಿ




