ಸಿಎಂ ಬದಲಾವಣೆ ಇನ್ನೂ ತೀರ್ಮಾನವಾಗಿಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ – ಮಲ್ಲಿಕಾರ್ಜುನ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾಗಿ ಸದ್ಯಕ್ಕೆ ಯಾವುದೇ ಚರ್ಚೆಗಳು ನಡೆದಿಲ್ಲ, ಅದಕ್ಕೆ ದಿನಾಂಕವೂ ನಿಗದಿಯಾಗಿಲ್ಲ. ಈ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪದೇ ಪದೇ ಪ್ರಶ್ನೆ ಕೇಳಬೇಡಿ. ಈ ಬಗ್ಗೆ ಯಾವುದೇ ಊಹಾಪೋಹಗಳನ್ನು ಮಾಧ್ಯಮಗಳು ಸೃಷ್ಟಿಸಬಾರದು ಎಂದು ಮನವಿ ಮಾಡಿದರು.

ಸಿಎಂ ಬದಲಾವಣೆಯ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಸಮಯ ನಿಗದಿಯಾಗದೆ ಈ ಕ್ಷಣದಲ್ಲೇ ಬದಲಾವಣೆ ಆಗುತ್ತದೆಯೋ ಇಲ್ಲವೋ ಹೇಳಲು ಸಾಧ್ಯವಿಲ್ಲ. ನಾನು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರು ಸೇರಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

































































































error: Content is protected !!
Scroll to Top