ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ-ಸಮ್ಮಿಲನ

ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ 1997-2000 ಬಿಎ ವಿಭಾಗದ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಿಗೆರೆ, ಕಾಸರಗೋಡು‌ ಸೇರಿದಂತೆ ದೂರದ ಊರುಗಳಿಂದ ಬಂದಿರುವ ಮತ್ತು ಸ್ಥಳೀಯ ಹಳೇ ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲಿ ಕುಳಿತುಕೊಂಡು ತಮ್ಮ 26 ವರ್ಷಗಳ ಹಿಂದಿನ ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಮೆಲುಕು ಹಾಕಿದರು.

ಗುರುವಂದನೆ
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಹಾಗೂ ಹಿರಿಯ ಶಿಕ್ಷಕರಾದ ನಾಗರಾಜ, ವೈ ಪಾಂಡುರಂಗ ನಾಯಕ್, ಕೃಷ್ಣ ಆಚಾರ್, ಶ್ರೀನಿವಾಸ್ ರಾವ್ ಹಾಗೂ ಎಂ.ಜಿ. ಅಸದಿ ಅವರನ್ನು ಅಭಿನಂದಿಸಿ ಗುರುವಂದನೆ ಸಲ್ಲಿಸಲಾಯಿತು. ಹಿರಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಶುಭದರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರೊನಾಲ್ಡ್ ಸ್ವಾಗತಿಸಿ, ನಿರಂಜನ್ ಜೈನ್ ಕಾರ್ಯಕ್ರಮ ನಿರೂಪಿಸಿದರು.









































































































error: Content is protected !!
Scroll to Top