ಬಂಗಾಳದಲ್ಲಿ ಮೊತ್ತಮೊದಲ ಬಾರಿಗೆ ಅಧಿಕಾರ ಸ್ಥಾಪಿಸುವತ್ತ ಬಿಜೆಪಿ

ಕೋಲ್ಕತಾ : ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ ಪೈಕಿ ಚುನಾವಣೆ ಪೂರ್ಣಗೊಂಡ 293 ಕ್ಷೇತ್ರಗಳಲ್ಲಿ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಂಗಾಳದಲ್ಲಿ ಮೊತ್ತಮೊದಲ ಬಾರಿಗೆ ಬಿಜೆಪಿ ಅಧಿಕಾರ ಸ್ಥಾಪಿಸುವ ಸನ್ನಾಹದಲ್ಲಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಆದ 148 ಅನ್ನು ಬಿಜೆಪಿ ದಾಟುವ ಸಾಧ್ಯತೆ ದಟ್ಟವಾಗಿದೆ. ಸುಮಾರು 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ದೀದಿ ನೇತೃತ್ವದ ಟಿಎಂಸಿಗೆ ಹಿನ್ನಡೆ
ಕಳೆದ ಒಂದು ದಶಕದಿಂದ ಅಧಿಕಾರದಲ್ಲಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದ್ಯ 100ರ ಆಸುಪಾಸಿನಲ್ಲಿ ಸ್ಥಾನಗಳಲ್ಲಿ ಮುನ್ನಡೆ ಪಡೆದು ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಭವಾನಿಪುರ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಎದುರಿಸುತ್ತಿದ್ದಾರೆ. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರೂ, ನಂತರದ ಸುತ್ತುಗಳಲ್ಲಿ ಅಲ್ಪ ಮುನ್ನಡೆ ಸಾಧಿಸಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಅಲೆ ಎದ್ದು ದೀದಿಯನ್ನು ಮುಖ್ಯಮಂತ್ರಿ ಗದ್ದುಗೆಗೆ ಕೂರಿಸುವಂತೆ ಮಾಡಿದ ನಂದಿಗ್ರಾಮದಲ್ಲಿ ಈಗ ಬಿಜೆಪಿಯ ಸುವೇಂದು ಹವಾ ಇದೆ. ಮಾಜಿ ಟಿಎಂಸಿ ನೇತಾರರಾದ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ತಮ್ಮ ಮುನ್ನಡೆಯನ್ನು ಮುಂದುವರಿಸಿದ್ದಾರೆ. ಹ್ಯುಮಾಯೂನ್ ಕಬೀರ್ ಅವರ ಹೊಸ ಪಕ್ಷ ಮತ್ತು ಎಡರಂಗ-ಕಾಂಗ್ರೆಸ್ ಮೈತ್ರಿಕೂಟ ಬಹುತೇಕ ನೆಲಕಚ್ಚಿವೆ. ಕಾಂಗ್ರೆಸ್ ಮೈತ್ರಿಕೂಟ ಕೇವಲ 1 ಸ್ಥಾನದಲ್ಲಿ ಮುನ್ನಡೆ ಹೊಂದಿದೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ವಿವರ
ಒಟ್ಟು ವಿಧಾನಸಭಾ ಕ್ಷೇತ್ರಗಳು: 294
ಮತ ಎಣಿಕೆ ಆಗುತ್ತಿರುವುದು: 293
ಬಹುಮತಕ್ಕೆ ಬೇಕಾಗಿರುವುದು: 148 ಸ್ಥಾನ
ಎನ್​ಡಿಎ: 166 ಕ್ಷೇತ್ರಗಳಲ್ಲಿ ಮುನ್ನಡೆ
ಟಿಎಂಸಿ: 101 ಕ್ಷೇತ್ರಗಳಲ್ಲಿ ಮುನ್ನಡೆ
ಕಾಂಗ್ರೆಸ್-ಎಡರಂಗ : 0





























































































error: Content is protected !!
Scroll to Top