ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ : 15 ವರ್ಷಗಳ ಮಮತಾ ಬ್ಯಾನರ್ಜಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ಕುರಿತು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್‌ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಿದ್ದಾರೆ.

ಬಂಗಾಳದ ಗೆಲುವು ಐತಿಹಾಸಿಕ – ಮೋದಿ
ಅಭೂತಪೂರ್ವ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಎಂದಿದ್ದರು. ಈ ಜನಾದೇಶವು ಜನರ ಬದಲಾವಣೆ ಮತ್ತು ಭಯದಿಂದ ಮುಕ್ತ ಭವಿಷ್ಯದ ಬಯಕೆಯನ್ನು ಪ್ರತಿಬಿಂಬಿಸುತ್ತದೆ. ಈ. ಫಲಿತಾಂಶದ ಹಿಂದೆ ಮಹಿಳಾ ಮತದಾರರು ನಿರ್ಣಾಯಕ ಶಕ್ತಿಯಿದೆ. ಜೊತೆಗೆ ರಾಜಕೀಯ ಹಿಂಸಾಚಾರವನ್ನು ಕೊನೆಗಾಣಿಸಲು ಜನರು ನಿರ್ಧರಿಸಿದ್ದಾರೆ ಎಂದಿದ್ದರು.



































































































error: Content is protected !!
Scroll to Top