ಅಂಚೆ ಮತಗಳನ್ನ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ಮತ ತಿರುಚಿದ ಆರೋಪದಲ್ಲಿ ಶೃಂಗೇರಿಯ ಬಿಜೆಪಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣ ರದ್ದು ಕೋರಿ ಡಿ.ಎನ್. ಜೀವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಡಿ.ಎನ್‌. ಜೀವರಾಜ್‌ ವಿರುದ್ಧದ ಕ್ರಿಮಿನಲ್‌ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ, ಅರ್ಜಿ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ.





























































































































error: Content is protected !!
Scroll to Top