ಬಾರಕೂರಿನ ಗತವೈಭವ ಮತ್ತೆ ಮರುಕಳಿಸಲು ಕ್ರಮ : ಸಚಿವ ಹೆಚ್.ಕೆ. ಪಾಟೀಲ್

ಉಡುಪಿ : ಬಾರಕೂರಿನ ಐತಿಹಾಸಿಕ ಮಹತ್ವವುಳ್ಳ ಕೋಟೆ-ಕೊತ್ತಲ, ಗುಡಿ ಗೋಪುರ ಸೇರಿದಂತೆ ಇಲ್ಲಿನ ಗತವೈಭವವನ್ನು ಸಾರುವ ಆಸ್ತಿಗಳನ್ನು ಸಂರಕ್ಷಿಸಿ, ಅವುಗಳ ಮೂಲಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡು ಪುನರುಜ್ಜೀವನಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ ಹೇಳಿದರು.

ಅವರು ಎ. 6ರಂದು ಬ್ರಹ್ಮಾವರ ತಾಲೂಕು ಬಾರಕೂರು ಪಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾರಕೂರ ಭವ್ಯ ಪರಂಪರೆಯನ್ನು ಹಾಗೂ ಈ ನಾಡನ್ನು ಆಳಿದ ಆಳುಪರ ಆಡಳಿತ ವ್ಯವಸ್ಥೆ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ಗತವೈಭವನ್ನು ತಿಳಿಸುವ ನಮ್ಮ ನಾಡಿನ ಇತಿಹಾಸ ಮರೆಯಾಗಿ ಹೋಗುತ್ತಿದ್ದು, ಅತ್ಯಂತ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ. ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವಂತಹ, ಇತಿಹಾಸದ ಮಹತ್ವವನ್ನು ಸಾರುವಂತಹ ಪ್ರತಿ ಕಲ್ಲುಗಳನ್ನು ಸಂರಕ್ಷಿಸುವ ಕೆಲಸ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಗದೀಶ್ ಶೆಟ್ಟಿರ್, ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ನಾಯಕರಾದ ಮೊಳಹಳ್ಳಿ ದಿನೇಶ್, ಹಿರಿಯರಾದ ಶಾಂತಾರಾಮ್ ಶೆಟ್ಟಿ, ಅಳುಪ ಮನೆತನದ ಆಕಾಶ್‌ರಾಜ್ ಜೈನ್ ಉಪಸ್ಥಿತರಿದ್ದರು.



































error: Content is protected !!
Scroll to Top