ಕೇವಲ ಆರು ತಿಂಗಳು ಸಂಸಾರ ನಡೆಸಿದ್ದ ಕಾರಣಕ್ಕೆ ಪತ್ನಿಗೆ ಜೀವನಾಂಶ ನಿರಾಕರಿಸಲು ಸಾಧ್ಯವಿಲ್ಲ : ಹೈಕೋರ್ಟ್

ಬೆಂಗಳೂರು : ಕೇವಲ 6-7 ತಿಂಗಳುಗಳ ಕಾಲ ಸಂಸಾರ ನಡೆಸಿದ್ದಾರೆ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಗೆ ಜೀವನಾಂಶ ಮತ್ತು ವ್ಯಾಜ್ಯ ವೆಚ್ಚ ಕೋರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಲಾಗದು ಎಂದು ಹೈಕೋರ್ಟ್ ಹೇಳಿದೆ.

ಬೆಂಗಳೂರಿನ 24 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವ ಮೂಲಕ ನ್ಯಾಯಮೂರ್ತಿ ಡಾ. ಕೆ. ಮನ್ಮಧ ರಾವ್ ಅವರು ಈ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 17, 2025 ರಂದು ನಗರದ ಕುಟುಂಬ ನ್ಯಾಯಾಲಯದ VI ಹೆಚ್ಚುವರಿ ಪ್ರಧಾನ ನ್ಯಾಯಾಧೀಶರು ನೀಡಿದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ಆದೇಶವನ್ನು ಬದಿಗಿಟ್ಟು, ಸಂಬಂಧಪಟ್ಟ ಆಸ್ತಿ ಮತ್ತು ಹೊಣೆಗಾರಿಕೆಗಳ ಅಫಿಡವಿಟ್ ಮತ್ತು ಸೂಕ್ತ ಆದೇಶಗಳನ್ನು ನೀಡಲು ಕುಟುಂಬ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.









































































































error: Content is protected !!
Scroll to Top