ಕಲಾವಿದರಿಗೆ ಅವಹೇಳನ, ಬೆದರಿಕೆ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮಂಗಳೂರು : ಯಕ್ಷಗಾನ ಕಲಾವಿದರ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ಯಕ್ಷಗಾನ ರಂಗದ ಪ್ರಮುಖ ಕಲಾವಿದರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದ ಮೇಲೆ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪಾರಾಗಲು ಅವರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನಗರದ ಆರನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ.

ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕ (ಪಿಪಿ) ಮೋಹನ್ ಕುಮಾರ್ ಬಿ. ಅವರು ಆರೋಪಿಯು ಸಮಾಜದಲ್ಲಿ ಗೌರವ ಹೊಂದಿರುವ ಕಲೆ ಮತ್ತು ಕಲಾವಿದರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಿದ್ದಾರೆ. ಇಂತಹ ಕೃತ್ಯಗಳು ಸಮಾಜದ ಸ್ವಾಸ್ಥ್ಯ ಕೆಡಿಸುತ್ತವೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಪ್ರಬಲವಾಗಿ ವಾದಿಸಿದ್ದರು. ಉಭಯ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪದ ಗಂಭೀರತೆಯನ್ನು ಪರಿಗಣಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.









































































































error: Content is protected !!
Scroll to Top