ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ

ದೆಹಲಿ : 2025ರ ಏಪ್ರಿಲ್‌ 22ರಂದು ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ಪ್ರವಾಸಕ್ಕೆಂದು ಬಂದಿದ್ದ 26 ಜೀವಗಳನ್ನು ಉಗ್ರರು ಬಲಿ ಪಡೆದಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್‌ ಸಿಂಧೂರʼ ಎಂಬ ಹೆಸರಿನಲ್ಲಿ ಮೇ 7, 8ರ ರಾತ್ರಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆ ಪಾಕ್‌ನ 9 ಉಗ್ರನೆಲೆಗಳನ್ನು ಧ್ವಂಸಗೊಳಿಸಿತ್ತು. ʻಆಪರೇಷನ್‌ ಸಿಂಧೂರʼಕ್ಕೆ ಇಂದು ವರ್ಷ.

ಪಾಕ್ ಉಗ್ರರು ನಡೆಸಿದ ಪಹಲ್ಗಾಮ್‌ ದಾಳಿಗೆ ಪ್ರತಿಯಾಗಿ ಮೊದಲು ಭಾರತ ರಾಜತಾಂತ್ರಿಕ ಸೇಡಿನ ಕ್ರಮ ಆರಂಭಿಸಿತ್ತು. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ಭಾರತ, ಉಭಯ ದೇಶಗಳ ನಡುವಿನ ಅಟಾರಿ-ವಾಘಾ ಗಡಿ ಮುಚ್ಚುವಿಕೆಯಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಆದರೆ ಈ ಕ್ರಮಗಳು ಸಾಲದು ಎಂಬ ಕೂಗು ಭಾರತದಲ್ಲಿ ಎದ್ದಿತ್ತು. ಆಗ ಅದಕ್ಕೆ ಪ್ರತಿಯಾಗಿ ಭಾರತ ನಡೆಸಿದ್ದೇ, ʻಆಪರೇಷನ್‌ ಸಿಂಧೂರʼ. ಕೆಲ ದಿನಗಳ ಕಾಲ ಭಾರತೀಯ ಸೇನೆ ದಾಳಿ ಮುಂದುವರೆಸಿತ್ತು. ಮೇ 10 ಕದನ ವಿರಾಮ ಘೋಷಿಸಲಾಯಿತು.









































































































error: Content is protected !!
Scroll to Top