ಕಾರ್ಕಳ: ಬೈಲೂರು ಪಳ್ಳಿ ಕ್ರಾಸ್ ಬಳಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ರಮೇಶ ಎಂಬುವವರು ತಮ್ಮ ಸ್ಕೂಟರ್‌ನಲ್ಲಿ ಗುಡ್ಡೆಯಂಗಡಿ ಕಡೆಗೆ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಾಯಗೊಂಡ ರಮೇಶ ಅವರನ್ನು ತಕ್ಷಣವೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ















