ಬೀಡಿ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ

ಕಾರ್ಕಳ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ರಾಜ್ಯಾದ್ಯಂತ ಅಸಂಘಟಿತ ವಲಯದಲ್ಲಿ ದುಡಿಯುವ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದ್ದು, ಕಾರ್ಕಳದ ಸಿಐಟಿಯು ಕಛೇರಿಯಲ್ಲಿ ಮೇ 9ರಂದು ತಾಲೂಕು ಬೀಡಿ ಕಾರ್ಮಿಕರ ಸಂಘ (ಸಿಐಟಿಯು) ಮತ್ತು ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದೊಂದಲ್ಲಿ ಮೊದಲ ಹಂತದ ಸ್ಮಾರ್ಟ್ ಕಾರ್ಡ್ ವಿತರಣೆ ನಡೆಯಿತು.

ಈ ಸಂದರ್ಭ ಮಾತನಾಡಿದ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್. ಕಾಂಚನ್ ಈ ಯೋಜನೆಯು ಬೀಡಿ ಕಾರ್ಮಿಕರಿಗೆ ಪ್ರಯೋಜನಕಾರಿಯಾಗಿದ್ದು, ಸದ್ಯ ಅಪಘಾತ ಪರಿಹಾರ ಸೌಲಭ್ಯಗಳು ಮತ್ತು ಸಹಜ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ ದೊರಕಲಿದೆ. ಇದಲ್ಲದೆ ಸರಕಾರ ಇನ್ನೂ ಹೆಚ್ಚಿನ ಸವಲತ್ತುಗಳನ್ನು ಕಾರ್ಮಿಕರಿಗೆ ನೀಡಬೇಕಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಯೋಜನೆ ಸಮರ್ಪಕವಾಗಿ ಜಾರಿ ಮಾಡಲು ಹೆಚ್ಚಿನ ಸವಲತ್ತುಗಳನ್ನು ಪಡೆಯಲು ಹೋರಾಟದ ಅಗತ್ಯವು ಇದೆ ಎಂದು ಹೇಳಿದರು. ಈ ಸಂದರ್ಭ ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ ಮತ್ತು ಸಿಐಟಿಯು ಮುಖಂಡರಾದ ಪುಷ್ಪ ಉಪಸ್ಥಿತರಿದ್ದರು.































































































error: Content is protected !!
Scroll to Top