ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಿದೆ. ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಅದ್ದೂರಿ ಸಮಾರಂಭವು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್‌ಡಿಎಯ ಹಲವಾರು ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ದಿನಾಚರಣೆಯಾದ ಇಂದೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸುವೇಂದು ಅಧಿಕಾರಿ ಅವರ ಹೆಸರನ್ನು ಪಕ್ಷದ ಕಾರ್ಯಕರ್ತರು ಮತ್ತು ಶಾಸಕರ ಮುಂದೆ ಘೋಷಿಸಿದರು. ಬಂಗಾಳದಲ್ಲಿ ಹೊಸ ಸರ್ಕಾರವನ್ನು ಮುನ್ನಡೆಸಲು ಬಿಜೆಪಿ ಶಾಸಕಾಂಗ ಪಕ್ಷವು ಸುವೇಂದು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಹೇಳಿದರು. ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೂಡಲೇ ಅಧಿಕಾರಿ ಅವರು ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್ ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಔಪಚಾರಿಕವಾಗಿ ಹಕ್ಕು ಮಂಡಿಸಿದರು.

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 207 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟ ಬಹುಮತ ಗಳಿಸಿತು. ತೃಣಮೂಲ ಕಾಂಗ್ರೆಸ್ (ಟಿಎಂಸಿ) 80 ಸ್ಥಾನಗಳನ್ನು ಗೆದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಿಎಂಸಿಯ 15 ವರ್ಷಗಳ ಆಡಳಿತ ಅಂತ್ಯವಾಯಿತು.































































































error: Content is protected !!
Scroll to Top