ಸತತ ಎರಡನೇ ಬಾರಿಗೆ ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ

ಗುವಾಹಟಿ : ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅಸ್ಸಾಂನ ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಅಸ್ಸಾಂನಲ್ಲಿ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಗೇರಿದ ಮೊದಲ ಕಾಂಗ್ರೆಸ್ಸೇತರ ನಾಯಕ ಎಂಬ ಹೆಗ್ಗಳಿಕೆಗೆ ಹಿಮಂತ ಬಿಸ್ವಾ ಶರ್ಮಾ ಪಾತ್ರರಾಗಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದ ನಂತರ ಈ ಸರ್ಕಾರ ರಚನೆಯಾಗಿದೆ.

















































error: Content is protected !!
Scroll to Top