35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿ ಬಂಧನ

ಮಂಗಳೂರು : ಲಕ್ಷಾಂತರ ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 35 ಲಕ್ಷ ರೂ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡೋವಿಡ್ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಹಾನಾ (21) ಬಂಧಿತ ಆರೋಪಿತೆ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಳು. ಮಂಗಳೂರಿನ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮುಲ್ಕಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯಿಂದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 1 ಕೆ.ಜಿ 42 ಗ್ರಾಂ ತೂಕದ ಅತ್ಯಂತ ದುಬಾರಿ ಎನ್ನಲಾದ ‘ಹೈಡ್ರೋವಿಡ್ ಗಾಂಜಾ’ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಇತರ ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಈ ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈನಿಂದ ತರಿಸಿಕೊಂಡಿದ್ದಳು. ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಸಿ ಅತಿ ವೇಗವಾಗಿ ಹಣ ಗಳಿಸುವ ಉದ್ದೇಶದಿಂದ ಈ ಜಾಲದಲ್ಲಿ ಈಕೆ ಸಕ್ರಿಯಳಾಗಿದ್ದಳು ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.
​ಈ ಯುವತಿಯ ಮೇಲೆ ಈ ಹಿಂದೆಯೂ ಗಂಭೀರ ಪ್ರಕರಣಗಳು ದಾಖಲಾಗಿವೆ. ಮಂಗಳೂರಿನ ಕಾವೂರು ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದಲ್ಲೂ ಈಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.

































error: Content is protected !!
Scroll to Top