ಇಂದಿರಾ ಗಾಂಧಿಯವರ ವಿರುದ್ಧ ಸುಳ್ಳು ಸುದ್ದಿ ಹರಡಿದ ಸುನಿಲ್‌ ಕುಮಾರ್‌ ಕ್ರಮ ವಿರುದ್ಧ ಕೈಗೊಳ್ಳುವಂತೆ ಮಹಿಳಾ ಕಾಂಗ್ರೆಸ್ ನಿಯೋಗ ಎಸ್‌ಪಿಗೆ ಮನವಿ

ಕಾರ್ಕಳ : ಮಾಜಿ ಪ್ರಧಾನಮಂತ್ರಿ ದಿ. ಇಂದಿರಾ ಗಾಂಧಿ ಅವರ ಕುರಿತು ಸುಳ್ಳು ಸುದ್ದಿಯನ್ನು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ನಿಯೋಗವು ಮೇ 14ರಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಿದರು.

ಸಚಿವರಾಗಿ ಕಾರ್ಯನಿರ್ವಹಿಸಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಇಂತಹ ಸುಳ್ಳು ಸುದ್ದಿಯನ್ನು ಪರಿಶೀಲಿಸದೆ ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವುದು ಅಕ್ಷಮ್ಯ ಅಪರಾಧ. ದೇಶಕ್ಕೆ ದಿ. ಶ್ರೀಮತಿ ಇಂದಿರಾ ಗಾಂಧಿಯವರ ಕೊಡುಗೆ ಅಪಾರ. ಅಂತಹ ಮೇರು ನಾಯಕಿಯ‌ನ್ನು ಅಪಮಾನ ಮಾಡಿರುವುದು ಶಾಸಕ ಸುನಿಲ್ ಕುಮಾರ್ ಅವರಿಗೆ ಶೋಭೆ ತರುವುದಿಲ್ಲ. ಇನ್ನಾದರೂ ಶಾಸಕ ಸುನಿಲ್ ಕುಮಾರ್ ಅವರು ಬಿಜೆಪಿ ಐ.ಟಿ ಸೆಲ್‌ನ ಸುಳ್ಳು ಮಾಹಿತಿಯನ್ನು ಪರಿಶೀಲಿಸಿ ಹಂಚುವುದು ಉತ್ತಮ ಎಂದು ಮಹಿಳಾ ಕಾಂಗ್ರೆಸ್ ನಿಯೋಗ ಹೇಳಿದೆ.

ಈ ಸಂದರ್ಭ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಬಾನು ಭಾಸ್ಕರ್, ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷರಾದ ಪ್ರತಿಮಾ ರಾಣೆ ಹಾಗೂ ರೆಹಮತ್, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ಚರಿತ್ರಾ ಎಂ., ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯವರಾದ ಪುಷ್ಪ ಅಂಚನ್ ಹಾಗೂ ಸಂಧ್ಯಾ ತಿಲಕ್‌ರಾಜ್ ಉಪಸ್ಥಿತರಿದ್ದರು..

















































error: Content is protected !!
Scroll to Top