ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರಿಗೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಸಚಿವರಾದ ಸತೀಶ್ ಜಾರಕಿಹೊಳಿ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಆರ್. ಪಾಟೀಲ್ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು.
























