ಕಾರ್ಕಳ : ಪಳ್ಳಿ ನಿಂಜೂರು ವಲಯ ಬಂಟರ ಸಂಘದ ನೇತೃತ್ವದಲ್ಲಿ ಬಂಟರ ಸಂಘ ಕಾರ್ಕಳ, ಕಾಪು ಹಾಗೂ ಹೆಬ್ರಿ ತಾಲೂಕಿನ ಸಹಯೋಗದಲ್ಲಿ ಹೊನಲು ಬೆಳಕಿನ ಬಂಟರ ಕ್ರಿಡೋತ್ಸವ ಮೇ 16ರಂದು ಸಂಜೆ 3 ಗಂಟೆಯಿಂದ ಪಳ್ಳಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಉದ್ಘಾಟಿಸಲಿದ್ದು, ಪಳ್ಳಿ ನಿಂಜೂರು ವಲಯ ಬಂಟರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಬಂಟ್ಸ್ ಕ್ರೀಡೋತ್ಸವ ಸಮಿತಿಯ ಅಧ್ಯಕ್ಷ ರಘುನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಾ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಜಯಕರ ಎಂ. ಶೆಟ್ಟಿ ಬಹುಮಾನ ವಿತರಿಸಲಿದ್ದು, ಪಳ್ಳಿ ನಿಂಜೂರು ಬಂಟರ ಸಂಘದ ಸ್ಥಾಪಕಾಧ್ಯಕ್ಷ ಮನೋಹರ ಶೆಟ್ಟಿ, ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವಿಜಯ ಎಂ. ಶೆಟ್ಟಿ ಉಪಸ್ಥಿತರಿರಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 8073016315 (ದಿನಕರ ಶೆಟ್ಟಿ), 9481510388 (ಭರತ್ ಶೆಟ್ಟಿ), 9483408955 (ಪ್ರಶಾಂತ್ ಶೆಟ್ಟಿ) ಅಥವಾ 9113624961 (ಸಂತೋಷ್ ಶೆಟ್ಟಿ) ಅವರನ್ನು ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.































