ಪೆಟ್ರೋಲ್‌, ಡೀಸೆಲ್‌ ದರದಲ್ಲಿ 3 ರೂ. ಏರಿಕೆ

ದೆಹಲಿ : ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ

ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ.

ಮಾರ್ಚ್ 2024 ರಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 2 ರಷ್ಟು ಕಡಿತಗೊಳಿಸಲಾಗಿತ್ತು. ಮೇ 2022 ಅಬಕಾರಿ ಸುಂಕ ಕಡಿತವಾಗಿದ್ದರಿಂದ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 6 ರೂ.ರಷ್ಟು ಇಳಿಕೆಯಾಗಿತ್ತು. ಕೇಂದ್ರದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ವ್ಯಾಟ್ ಕಡಿಮೆ ಮಾಡಿದ್ದರಿಂದ, ಗ್ರಾಹಕರಿಗೆ ಒಟ್ಟಾರೆಯಾಗಿ ಪ್ರತಿ ಲೀಟರ್‌ ಪೆಟ್ರೋಲ್ ಮೇಲೆ ಸುಮಾರು 9.5 ರೂ. ಮತ್ತು ಡೀಸೆಲ್ ಮೇಲೆ 7 ರೂ. ರಷ್ಟು ದರ ಇಳಿಕೆಯ ಲಾಭ ಸಿಕ್ಕಿತ್ತು.































































































error: Content is protected !!
Scroll to Top