ಕಾರ್ಕಳ: ಇಲ್ಲಿನ ಪರಶುರಾಮ ಥೀಮ್ ಪಾರ್ಕ್ ಬಳಿ ಮೇ 14ರಂದು ರಾತ್ರಿ ಗೂಡ್ಸ್ ವಾಹನ ಮತ್ತು ಮೋಟಾರ್ ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೀಕ್ಷಿತ್ ಹಾಗೂ ಸಹ ಸವಾರ ಸಂಜೀವ ಪೂಜಾರಿ ಸಂಚರಿಸುತ್ತಿದ್ದ ಬೈಕ್‌ಗೆ, ಅತಿ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿದೆ. ಮೂಳೆ ಮುರಿತಕ್ಕೊಳಗಾದ ಇಬ್ಬರನ್ನೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಎಸಗಿದ ಚಾಲಕನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಲೂರು; ಗೂಡ್ಸ್ ವಾಹನ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ
















