ಕಾರ್ಕಳ : ಸಂಸ್ಕಾರಯುತ ಶಿಕ್ಷಣ ನೀಡುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲಿದೆ. ಹೀಗಾಗಿ ಮಕ್ಕಳಿಗೆ ಎಳೆವೆಯಲ್ಲೇ ಮೌಲ್ಯಯುತ, ಸಂಸ್ಕಾರಯುತ ಶಿಕ್ಷಣ ದೊರೆಯುವಂತಾಗಬೇಕೆಂದು ಉದ್ಯಮಿ ಮಹಾವೀರ ಜೈನ್ ಬಜಗೋಳಿ ಅಭಿಪ್ರಾಯಪಟ್ಟರು.
ಅವರು ಮೇ 16ರಂದು ಬಜಗೋಳಿ ಗಣಪತಿ ಸಭಾಂಗಣದಲ್ಲಿ ಎಸ್‌ಕೆಡಿಆರ್‌ಡಿಪಿ ವತಿಯಿಂದ ನಡೆದ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರೂಪಾ ಶೆಟ್ಟಿ, ಪ್ರವೀಣ್ ಹೆಗ್ಡೆ, ಅನಿಲ್ ಎಸ್. ಪೂಜಾರಿ, ಸೌಮ್ಯ, ಜಯಶ್ರೀ, ಹಿತೇಶ್ ಶೆಟ್ಟಿ, ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹರಿಶ್ಚಂದ್ರ ತೆಂಡೂಲ್ಕರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ 142 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳ ಪೋಷಕರು, ಸೇವಾಪ್ರತಿನಿಧಿಗಳು, ಗ್ರಾಮಸ್ಥರು ಗ್ರಾಮಾಭಿವೃದ್ಧಿ ಯೋಜನೆ, ಜನಜಾಗ್ರತಿ ವೇದಿಕೆ, ಭಜನಾ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸದಾನಂದ ಕೋಟ್ಯಾನ್ ಸ್ವಾಗತಿಸಿ, ಸುಮಿತ್ರಾ ವಂದಿಸಿದರು. ಭಜನಾ ಪರಿಷತ್ತಿನ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಕಾರ್ಯಕ್ರಮ ನಿರೂಪಿಸಿದರು.



























