ಉಡುಪಿ ಬಿಜೆಪಿಗರಿಗೆ ಸೌಹಾರ್ದತೆಯ ಪಾಠ ಮಾಡಲು ಹೋಗಿ ಮುಜುಗರಕ್ಕೀಡಾದ ಹೆಬ್ಬಾಳ್ಕರ್

ಉಡುಪಿ : ಶನಿವಾರ ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ನಿವಾಸಕ್ಕೆ ಹಿಂದು ವೃದ್ಧ ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು, ತಾವು ಹಿಂದೂ ಮಹಿಳೆಯ ನೆರೆಮನೆಯವರು, ಬಡ ಮಹಿಳೆಗೆ ಮನೆ ನಿವೇಶನ ನೀಡುವಂತೆ ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಸಚಿವರು ಇದು ಹಿಂದೂ ಮುಸ್ಲಿಂ ಸೌಹಾರ್ದ, ಉಡುಪಿಯ ಬಿಜೆಪಿಯವರು ಇದರಿಂದ ಪಾಠ ಕಲಿಯಬೇಕು ಎಂದು ಹೇಳಿದ್ದರು.

ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬಂದ ಗಿರಿಜಾ ಶೆಟ್ಟಿಗಾರ್ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಅವರ ಪುತ್ರಿಯೇ ಕರೆತಂದಿದ್ದು, ಸಚಿವರ ಮುಂದೆ ಮಾತ್ರ ತಾನು ಹಿಂದೂ ಮಹಿಳೆಯ ನೆರೆಮನೆಯವರು ಎಂದು ಸುಳ್ಳು ಹೇಳಿ ಉಸ್ತುವಾರಿ ಸಚಿವರನ್ನೇ ಯಾಮಾರಿಸಿದ್ದಾರೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಿಂದೆ ಮುಂದೆ ಯೋಚಿಸದೆ ಮಾಧ್ಯಮದ ಮುಂದೆ ಉಡುಪಿ ಬಿಜೆಪಿಗರಿಗೆ ಸೌಹಾರ್ದತೆಯ ಭಾಷಣ ಮಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಉಡುಪಿಯ ಜನತೆ ಸೌಹಾರ್ದತೆಯ ಬಗ್ಗೆ ಬೆಳಗಾವಿಯಿಂದ ಬಂದ ಉಸ್ತುವಾರಿ ಸಚಿವರಿಂದ ಕಲಿಯುವ ಅಗತ್ಯವಿಲ್ಲ ಎಂದು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಎಂದು ಪ್ರಕಟನೆಯಲ್ಲಿ ಹೇಳಿದ್ದಾರೆ.

ಉಗ್ರ ಹೋರಾಟದ ಎಚ್ಚರಿಕೆ
ಉಡುಪಿ ಜಿಲ್ಲೆಗೆ ಅತಿಥಿಯಂತೆ ಆಗಮಿಸಿ, 3 ವರ್ಷಗಳಿಂದ ಜಿಲ್ಲೆಯ ಅಭಿವೃದ್ದಿಗೆ ಎಳ್ಳುನೀರು ಬಿಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವರ ಇಂತಹ ಅವಿವೇಕದ ಮಾತುಗಳ‍ು ಅಕ್ಷಮ್ಯ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನಾಯಕರು, ಜನಪ್ರತಿನಿಧಿಗಳ ವಿರುದ್ಧ ಬೇಜವಾಬ್ದಾರಿ ಹೇಳಿಕೆ ಮುಂದುವರಿಸಿದರೆ ಮಹಿಳಾ ಮೋರ್ಚಾದ ವತಿಯಿಂದ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಚ್ಚರಿಕೆ ನೀಡಿದ್ದಾರೆ.





































































































error: Content is protected !!
Scroll to Top