ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ. ಡಿ. ಸತೀಶನ್‌

ತಿರುವನಂತಪುರಂ : ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.

ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ) ಅವರಿಗೂ ಅವಕಾಶ ಮಾಡಿಕೊಡಲಾಗಿದೆ. ಕಾಂಗ್ರೆಸ್​ನಿಂದ ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ. ಸಿ. ವಿಷ್ಣುನಾಥ್, ರೋಜಿ ಎಂ. ಜಾನ್, ಬಿಂದು ಕೃಷ್ಣ, ಎಂ. ಲಿಜು, ಟಿ. ಸಿದ್ದಿಕ್, ಕೆ. ಎ. ತುಳಸಿ ಮತ್ತು ಒ. ಜೆ. ಜನೀಶ್ ಸಚಿವರಾಗಲಿದ್ದಾರೆ.





































































































error: Content is protected !!
Scroll to Top