ಉಡುಪಿ: ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮವರ್ಷಾಚರಣೆಯ ನೆನಪಿನಾರ್ಥವಾಗಿ ಭಾರತ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿ ರಾಜ್ಯದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ನಾಮ ನಿರ್ದೇಶನಗೊಂಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಪ್ರಮೋದ್ ಮಧ್ವರಾಜ್ ಅವರು ಇಂತಹ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಅವಕಾಶ ದೊರೆತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ಮಹಾತ್ಮ ಫುಲೆ ಅವರ ಪ್ರಗತಿಪರ ಚಿಂತನೆಗಳು ಹಾಗೂ ಆದರ್ಶಗಳನ್ನು ಸಮಾಜದ ವಿವಿಧ ವರ್ಗಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.
ತಮಗೆ ಈ ಜವಾಬ್ದಾರಿಯುತ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಂಸ್ಕೃತಿ ಸಚಿವಾಲಯಕ್ಕೆ ಅವರು ತಮ್ಮ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಮರ್ಪಿಸಿದ್ದಾರೆ.
ಜ್ಯೋತಿರಾವ್ ಫುಲೆ 200ನೇ ಜನ್ಮವರ್ಷಾಚರಣೆ ಸಮಿತಿ: ಸದಸ್ಯರಾಗಿ ಪ್ರಮೋದ್ ಮಧ್ವರಾಜ್ ನೇಮಕ
























