ಟೆಸ್ಟ್‌ಗೆ ರಾಹುಲ್ ಉಪನಾಯಕ – ಮೂವರು ಕನ್ನಡಿಗರಿಗೆ ಅವಕಾಶ
ಮುಂಬೈ : ಬಿಸಿಸಿಐ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ. ಏಕದಿನ ಹಾಗೂ ಟೆಸ್ಟ್ ಎರಡೂ ತಂಡಗಳ ನಾಯಕನಾಗಿ ಶುಭ್ಮನ್ ಗಿಲ್ ಅವರನ್ನೇ ಆಯ್ಕೆ ಸಮಿತಿ ಮುಂದುವರಿಸಿದ್ದು, ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಹಾಗೂ ಏಕದಿನ ತಂಡದ ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ.
ಗುವಾಹಟಿಯಲ್ಲಿ ಸಭೆ ಸೇರಿದ್ದ ಆಯ್ಕೆ ಸಮಿತಿ ಎರಡೂ ತಂಡಗಳನ್ನು ಪ್ರಕಟಿಸಿದೆ. ಇತ್ತೀಚಿನ ದಿನಗಳಲ್ಲಿ ಫಾರ್ಮ್ ಕಳೆದುಕೊಂಡಿರುವ ರಿಷಭ್ ಪಂತ್ ಅವರು ಟೆಸ್ಟ್ ಉಪ ನಾಯಕತ್ವ ಕಳೆದುಕೊಂಡಿದ್ದಾರೆ. ಅವರ ಬದಲಿಗೆ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಅವಕಾಶ ದೊರೆತಿದೆ. ಏಕದಿನ ತಂಡದಲ್ಲಿ ಹೊಸಮುಖವಾಗಿ ಮೂವರು ಆಟಗಾರರು ಕಾಣಿಸಿಕೊಂಡಿದ್ದು, ಟೆಸ್ಟ್ ತಂಡದಲ್ಲಿ ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
ಟೆಸ್ಟ್ ತಂಡ
ಶುಭ್ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.


ಏಕದಿನ ತಂಡ
ಶುಭ್ಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್ (ಉಪ ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.





