ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಮೇ 20 ಅರ್ಜಿ ಸಲ್ಲಿಸಲು ಪ್ರಾರಂಭದ ದಿನವಾಗಿದ್ದು, ಜೂ. 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಜೂ. 11ರಂದು ತಾಲೂಕು ಕಲ್ಯಾಣ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲನೆ ಮಾಡಲಿದ್ದು, ಜೂ. 13ರಂದು ಆಯ್ಕೆ ಪಟ್ಟಿ ಪ್ರಕಟಗೊಳ್ಳುತ್ತದೆ. ಜೂ. 20ರಂದು ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅಂತಿಮ ದಿನಾಂಕವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.













































































error: Content is protected !!
Scroll to Top