ರಾಜ್ಯದಲ್ಲಿ ಶಿಕ್ಷಣ ಕ್ರಾಂತಿ – ಜೂ.1ರಂದು 1,000 ಕೆಪಿಎಸ್ ಶಾಲೆಗಳಿಗೆ ಶಂಕುಸ್ಥಾಪನೆ

ಶಿವಮೊಗ್ಗ : ಜೂ.1ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ (ಕೆಪಿಎಸ್) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಅವರು ಶುಕ್ರವಾರ ನಗರದ ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದರು.

ರಾಜ್ಯದಲ್ಲಿ ತಲಾ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಇದು ಶಿಕ್ಷಣ ಕ್ಷೇತ್ರದ ಮಹತ್ವದ ಸಾಧನೆಯಾಗಿದೆ. ಈ ಶಾಲೆಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ದೊರೆಯಲಿದ್ದು, ಇದು ಶಿಕ್ಷಣ ಕ್ಷೇತ್ರದ ಬ್ರಾಂಡ್ ಆಗಿ ಮಕ್ಕಳ ಭವಿಷ್ಯದ ಆಶಾಕಿರಣವಾಗಲಿದೆ. 800 ಶಾಲೆಗಳನ್ನು ಶಿಕ್ಷಣ ಇಲಾಖೆ ಹಾಗೂ 200 ಶಾಲೆಗಳನ್ನು ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಿರ್ಮಿಸಲಾಗುವುದು ಎಂದು ತಿಳಿಸಿದರು.







































































































error: Content is protected !!
Scroll to Top