ಜೂ. 18 : ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ದೆಹಲಿ : ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಜೂನ್‌ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್ 8 ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ, ಜೂನ್ 9 ನಾಮಪತ್ರ ಪರಿಶೀಲನೆ, ಜೂನ್ 11 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 24 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ. ಕಾಂಗ್ರೆಸ್‌ಗೆ ಸಿಗುವ ಮೂರು ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂದುವರಿಸುವ ಸಾಧ್ಯತೆ ಇದೆ. ಬಾಕಿ ಎರಡು ಸ್ಥಾನಗಳಿಗೆ ಪೈಪೋಟಿ ನಡೆಯಲಿದೆ. ಬಿಜೆಪಿಗೆ ಸಿಗುವ ಒಂದು ಸ್ಥಾನದ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಹೆಚ್‌.ಡಿ.ದೇವೇಗೌಡ ಅವರನ್ನು ಮುಂದುವರಿಸುವ ಬಗ್ಗೆ ಮಾತುಕತೆಗಳು ನಡೆದಿವೆ.







































































































error: Content is protected !!
Scroll to Top