ಮತ್ತೆ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ

ದೆಹಲಿ : ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಇಂದು ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಈ ಮೂಲಕ 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದಂತಾಗಿದೆ.

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15 ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರವನ್ನು ಹೆಚ್ಚಿಸಿವೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ.

ಮೇ 15 ರಂದು ಬೆಲೆಗಳನ್ನು ಲೀಟರ್‌ಗೆ 3 ರೂ. ಹೆಚ್ಚಿಸಲಾಯಿತು. ನಂತರ ಮೇ 19 ರಂದು 90 ಪೈಸೆ ಹೆಚ್ಚಳವಾಯಿತು. ಒಟ್ಟಾರೆಯಾಗಿ, ಲೀಟರ್‌ಗೆ ಸುಮಾರು 5 ರೂ.ಗಳಷ್ಟು ಹೆಚ್ಚಾಗಿದೆ.

ಎಲ್ಲೆಲ್ಲಿ ಎಷ್ಟು ದರ ?
ಪೆಟ್ರೋಲ್‌
ದೆಹಲಿ: 99.51 (+0.87)
ಕೋಲ್ಕತ್ತಾ: 110.64 (+0.94)
ಮುಂಬೈ: 108.49 (+0.90)
ಚೆನ್ನೈ: 105.31 (+0.82)

ಡೀಸೆಲ್
ದೆಹಲಿ: 92.49 (+0.91)
ಕೋಲ್ಕತ್ತಾ: 97.02 (+0.95)
ಮುಂಬೈ: 95.02 (+0.94)
ಚೆನ್ನೈ: 96.98 (+0.87)







































































































error: Content is protected !!
Scroll to Top