ಮೇ 24 : ಕರ್ನಾಟಕ ಜೈ ಭೀಮ್‌ ಯುವ ಸೇನಾ ಸೇವಾ ಟ್ರಸ್ಟ್‌ – ದ್ವಿತೀಯ ವರ್ಷದ ಕಾರ್ಯಕ್ರಮ

ಕಾರ್ಕಳ : ಕರ್ನಾಟಕ ಜೈ ಭೀಮ್‌ ಯುವ ಸೇನಾ ಸೇವಾ ಟ್ರಸ್ಟ್‌ ಹಾಗೂ ಕರ್ನಾಟಕ ಜೈ ಭೀಮ್‌ ಯುವ ಸೇನೆಯ ದ್ವಿತೀಯ ವರ್ಷದ ಕಾರ್ಯಕ್ರಮ ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಬಂಡಿಮಠ ಬಸ್ಸು ನಿಲ್ದಾಣದಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಂಗ್ರೆಸ್ ಮುಖಂಡ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ್‌ ಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್‌ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಬ್ಯಾಗು, ಛತ್ರಿ ಮತ್ತು ಪುಸ್ತಕ ವಿತರಣೆ, ಕ್ರೀಡೆ ಹಾಗೂ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಹಾಗೂ ಅಸೌಖ್ಯದಿಂದ ಬಳಲುತ್ತಿರುವ ಸಮುದಾಯದವರಿಗೆ ಸಹಾಯಧನ ವಿತರಿಸಲಾಗುವುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















































error: Content is protected !!
Scroll to Top