ಸಿಎನ್‌ಜಿ ದರ 2 ರೂ. ಏರಿಕೆ

ದೆಹಲಿ : ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ದೆಹಲಿಯಲ್ಲಿ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದೆ.

ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ. ಹೊಸ ಬೆಲೆಯ ಅನ್ವಯ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್‌ಜಿ ಬೆಲೆ 8.09 ರೂ.ಗಳಿಗೆ ತಲುಪಿದೆ. ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಡುವೆಯೇ ಸಿಎನ್‌ಜಿ ಬೆಲೆ ಹೆಚ್ಚಳ ಕಂಡುಬಂದಿದೆ.

ಇತ್ತೀಚಿನ ದಿನಗಳಲ್ಲಿ ಸಿಎನ್‌ಜಿ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ, ಕಳೆದ 12 ದಿನಗಳಲ್ಲಿ ಪ್ರತಿ ಕೆಜಿಗೆ 6 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸತತ ಬೆಲೆ ಏರಿಕೆಯಿಂದ ಸಿಎನ್‌ಜಿ ಬಳಸುವ ಟ್ಯಾಕ್ಸಿ ಚಾಲಕರು, ವಾಣಿಜ್ಯ ವಾಹನ ಚಾಲಕರು ಹಾಗೂ ದಿನನಿತ್ಯ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೋಲಿಸಿದರೆ ಕಡಿಮೆ ವೆಚ್ಚದ ಪರ್ಯಾಯವಾಗಿದ್ದ ಸಿಎನ್‌ಜಿಯ ಆರ್ಥಿಕ ಲಾಭ ಕ್ರಮೇಣ ಕಡಿಮೆಯಾಗುತ್ತಿದೆ.









































































error: Content is protected !!
Scroll to Top