ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

















































error: Content is protected !!
Scroll to Top