ಹೆಬ್ರಿ : ಮನೆಗೆ ನುಗ್ಗಿ 59.97 ಲಕ್ಷ ರೂ. ಮೌಲ್ಯದ ಸೊತ್ತು ಕಳವು

ಹೆಬ್ರಿ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಮೇ 24ರಂದು ಹೆಬ್ರಿಯಲ್ಲಿ ನಡೆದಿದೆ.
ಕೀರ್ತನ ಪ್ರಭು ಎಂಬವರು ಬೆಳಗ್ಗೆ ಎದ್ದು ನೋಡುವಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಹಿಂಭಾಗದ ಕಿಟಕಿಯ ಚಿಲಕದ ಕೊಂಡಿಯನ್ನು ಮುರಿದು ಒಳನುಗ್ಗಿದ ಕಳ್ಳರು, ಮನೆಯ ಮೊದಲ ಮಹಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ಇತರ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಇವುಗಳ ಒಟ್ಟು ಮೌಲ್ಯ 59,97,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























































































































error: Content is protected !!
Scroll to Top