ತ್ಯಾಜ್ಯ ವಿಂಗಡಿಸಿ ನೀಡದಿದ್ದರೆ ನೀರು, ವಿದ್ಯುತ್‌ ಸಂಪರ್ಕ ಕಡಿತ – ಕಾರ್ಕಳ ಪುರಸಭೆ ಎಚ್ಚರಿಕೆ

ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯ ಸಾರ್ವಜನಿಕರು, ವ್ಯಾಪಾರಸ್ಥರು, ಹೊಟೇಲ್, ಬಾರ್ ಹಾಗೂ ರೆಸ್ಟೋರೆಂಟ್ ಮತ್ತು ವಾಣಿಜ್ಯ ಉದ್ದಿಮೆದಾರರು ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಕಡ್ಡಾಯವಾಗಿ ವಿಂಗಡಿಸಿ ನೀಡಬೇಕು ಇಲ್ಲದಿದ್ದಲ್ಲಿ ನೀರು, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕಾರ್ಕಳ ಪುರಸಭೆ ತಿಳಿಸಿದೆ.

ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಎಪ್ರಿಲ್ 1ರಿಂದ ಜಾರಿಗೆ ತಂದಿರುವ ‘ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು-2026’ರನ್ವಯ, ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ 4 ವಿಧದ ತ್ಯಾಜ್ಯ ವಿಂಗಡಣೆ ಕಡ್ಡಾಯವಾಗಿ ಪಾಲಿಸಬೇಕು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯ (ಬಲ್ಬ್, ಬ್ಯಾಟರಿ, ಅವಧಿ ಮೀರಿದ ಔಷಧಿ, ಪೇಂಟ್ ಡಬ್ಬಿಗಳು ಇತ್ಯಾದಿ) ಎಂಬುದಾಗಿ ವಿಂಗಡಿಸಿ ಪುರಸಭೆಯ ಘನ್ಯತ್ಯಾಜ್ಯ ವಿಲೇವಾರಿ ವಾಹನಗಳಿಗೆ ನೀಡಬೇಕು ಎಂದು ತಿಳಿಸಿದೆ.

ಕಟ್ಟುನಿಟ್ಟಿನ ಕ್ರಮ
ನಿಯಮದಂತೆ ತ್ಯಾಜ್ಯಗಳನ್ನು ವಿಂಗಡಿಸಿ ನೀಡದ ಸಾರ್ವಜನಿಕರು ಮತ್ತು ಉದ್ದಿಮೆದಾರರ ವಿರುದ್ಧ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು-2026ರ ಅಡಿಯಲ್ಲಿ ಕೇವಲ ದಂಡ ವಿಧಿಸುವುದಷ್ಟೇ ಅಲ್ಲದೆ ಅವರ ಮನೆ ಅಥವಾ ವಾಣಿಜ್ಯ ಮಳಿಗೆಗಳ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಎಚ್ಚರಿಸಿದೆ.









































































error: Content is protected !!
Scroll to Top