ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೊನೆಗೂ ಅಂತಿಮ ಹಂತಕ್ಕೆ ಬಂದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಹಾರ ಕೂಟ ಆಯೋಜಿಸಿದ್ದರು. ಈ ವೇಳೆ ನಡೆದ ಸಭೆಯಲ್ಲಿ ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದವರು ನುಡಿದಿದ್ದಾರೆ.
























