ನೀಟ್ ಮರುಪರೀಕ್ಷೆ : ಪ್ರಶ್ನೆಪತ್ರಿಕೆಗಳ ಸಾಗಣೆಗೆ ಭಾರತೀಯ ವಾಯುಪಡೆ ಬಳಕೆಗೆ ನಿರ್ಧಾರ

ದೆಹಲಿ : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ, ಕೇಂದ್ರ ಸರ್ಕಾರ ಜೂನ್ 21 ರಂದು ನಡೆಯಲಿರುವ ಮರುಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಸುರಕ್ಷಿತವಾಗಿ ನಡೆಸಲು ಸಾರಥ್ಯ ವಹಿಸಿದೆ. ಈ ಬಾರಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಭಾರತೀಯ ವಾಯುಪಡೆಯನ್ನು ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ಬಿಗಿಯಾದ ಸಮಯದ ಮಿತಿ ಮತ್ತು ಹವಾಮಾನ ವೈಪರೀತ್ಯದ ಸವಾಲುಗಳನ್ನು ಎದುರಿಸಲು ಅಂಚೆ ಸೇವೆಗಳ ಜೊತೆಗೆ ವಾಯುಪಡೆಯ ವಿಮಾನಗಳನ್ನು ಬಳಸಲಾಗುತ್ತದೆ. ಅಷ್ಟೇ ಅಲ್ಲದೆ, ಕೇವಲ ಸಾಗಣೆಯ ಸುರಕ್ಷತೆಗಾಗಿ ಭಾರತೀಯ ಭೂಸೇನೆಯ ಲಾಜಿಸ್ಟಿಕ್ಸ್ ನೆರವನ್ನು ಪಡೆಯುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ.

ಮರುಪರೀಕ್ಷೆಯ ಪ್ರಕ್ರಿಯೆಯು ಸಂಪೂರ್ಣವಾಗಿ ಸೋರಿಕೆ ಮುಕ್ತವಾಗಿರಲು ದೇಶದ ಪ್ರಮುಖ ಭದ್ರತಾ ಸಂಸ್ಥೆಗಳನ್ನು ಈ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗಿದೆ.

2027 ರಿಂದ ಡಿಜಿಟಲ್ ಪರೀಕ್ಷೆ ಪ್ರಶ್ನೆಪತ್ರಿಕೆ
ಸೋರಿಕೆಯಂತಹ ಹಗರಣಗಳಿಗೆ ಶಾಶ್ವತ ಬ್ರೇಕ್ ಹಾಕಲು ಸರ್ಕಾರ ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಗೆ ಕೈಹಾಕಿದೆ. 2027ರಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿ ಬದಲಾಯಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಪೇಪರ್ ಸೋರಿಕೆಯಾಗುವ ಸಾಧ್ಯತೆ ಸಂಪೂರ್ಣವಾಗಿ ತಪ್ಪಲಿದೆ ಎಂದು ಸರ್ಕಾರ ಆಶಿಸಿದೆ.

















































error: Content is protected !!
Scroll to Top