ಕಲ್ಲಗುಪ್ಪೆ ಶಾಲೆಯಲ್ಲಿ ಪ್ರಾರಂಭೋತ್ಸವದ ಸಂಭ್ರಮ

ಎಲ್.ಕೆ.ಜಿ – ಯು.ಕೆ.ಜಿ ತರಗತಿಗೆ ಚಾಲನೆ

ಕಾರ್ಕಳ : ಕಲ್ಲಗುಪ್ಪೆ ಸ. ಹಿ. ಪ್ರಾ ಶಾಲೆಯಲ್ಲಿ ಜೂ. 1ರಂದು 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವ ನಡೆಯಿತು.
ಸಮಾರಂಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಗಣೇಶ್ ಸಾಲಿಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಕಾರ್ಯದರ್ಶಿ ಸುಮಿತ್ರ ಇಡ್ಯಾ, ನಿವೃತ್ತ ಇಸ್ರೋ ವಿಜ್ಞಾನಿ ಜನಾರ್ದನ್ ಇಡ್ಯಾ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ದೀಪ್ತಿ ದಿನೇಶ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಉಮೇಶ್ ಕೆ.ಎಸ್., ದಾನಿಗಳಾದ ದಂಡಪಾಣಿ, ಎಸ್.ಡಿ.ಎಂ.ಸಿ. ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು, ಊರಿನ ಪ್ರಮುಖರು ಭಾಗವಹಿಸಿದ್ದರು. ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕ ಮನೋಹರ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಖೆಯಿಂದ ನೀಡಲಾದ ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು. ದಾನಿಗಳಾದ ಜನಾರ್ಧನ್ ಇಡ್ಯಾ ಎಲ್ಲಾ ಮಕ್ಕಳಿಗೆ ಊಟದ ಬಟ್ಟಲು ವಿತರಿಸಿದರು. ನೂತನವಾಗಿ ಆರಂಭಗೊಂಡ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗೆ ಚಾಲನೆ ನೀಡಲಾಯಿತು. ಶಿಕ್ಷಕಿಯರಾದ ಸುನಂದಾ ಕಾರ್ಯಕ್ರಮ ನಿರೂಪಿಸಿ, ಭಾರತಿ ವಂದಿಸಿದರು. ಶಿಕ್ಷಕಿಯರಾದ ಅಶ್ವಿನಿ, ಮಂಜುಳಾ, ಶ್ವೇತಾ ಪ್ರವೀಣ್ ಸಹಕರಿಸಿದರು.















































































































































error: Content is protected !!
Scroll to Top