ಕಾರ್ಕಳ : ಶ್ರೀ ಮಹಾಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್ ನಕ್ರೆ ಕುಕ್ಕುಂದೂರು, ನಕ್ರೆ ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವ ಜೂ. 1ರಂದು ನಡೆಯಿತು. ಇದೇ ಸಂದರ್ಭ ಬ್ಯಾಗ್, ಕೊಡೆ, ಪುಸ್ತಕ, ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ಶ್ರೀ ಮಹಾಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅರುಣ್ ಕುಮಾರ್ ಶೆಟ್ಟಿ, ಗ್ರಾ. ಪಂ. ಮಾಜಿ ಸದಸ್ಯರಾದ ಅಂಥೋನಿ ಡಿಸೋಜ, ಕ್ಯಾತರೀನ್ ಫೆರ್ನಾಂಡಿಸ್, ಚೇತನ್ ಫ್ರೆಂಡ್ಸ್ ಕ್ಲಬ್ ನಕ್ರೆ ಅಧ್ಯಕ್ಷ ಸಂಪತ್ ಸುವರ್ಣ, ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ರಂಜನ್ ಪ್ರಾರ್ಥಿಸಿದರು. ಶಿಕ್ಷಕರಾದ ಶಂಕರ್ ಪೂಜಾರಿ ಸ್ವಾಗತಿಸಿ, ಶಶಿಮಣಿ ಸಂಪತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕಿ ಪ್ರೀತಿ ವಾತ್ಸಲ್ಯ ವಂದಿಸಿದರು.






































































