ಬೈಕ್‌ಗಳ ಮುಖಾಮುಖಿ ಡಿಕ್ಕಿ, ಸವಾರನ ತಲೆಗೆ ಗಂಭೀರ ಗಾಯ

ಅಜೆಕಾರು: ನಿಯಂತ್ರಣ ತಪ್ಪಿ ಬಂದ ಬೈಕೊಂದು ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೆರ್ವಾಶೆ ಗರಡಿ ಬಳಿ ಮೇ 31ರಂದು ನಡೆದಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ನಾಗೇಶ ಬಿ. ಬಾಳಿಗ ಎಂಬುವವರ ತಲೆಗೆ ತೀವ್ರ ರಕ್ತಗಾಯವಾಗಿದ್ದು, ಬಲಗಾಲು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ತಕ್ಷಣ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿರ್ಲಾಲಿನ ಎಸ್. ವೆಂಕಟೇಶ ಪ್ರಭು (59) ಎಂಬುವವರು ನೀಡಿದ ದೂರಿನ ಮೇರೆಗೆ ಅಜೆಕಾರು ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.















































































































































error: Content is protected !!
Scroll to Top