ಬೆಂಗಳೂರು: ನಿರೀಕ್ಷೆಯಂತೆ ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಸಂಪುಟಕ್ಕೆ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಎಂಟ್ರಿ ಕೊಟ್ಟಿದ್ದಾರೆ.
ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಂದು ನೂತನ ಸಚಿವರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಶ್ರದ್ಧಾ ಪೂರ್ವಕವಾಗಿ ಪ್ರತಿಜ್ಞೆ ಸ್ವೀಕಾರ ಮಾಡಿದರು. ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಿದರು.
ಪ್ರಮಾಣ ಸ್ವೀಕಾರದ ಬಳಿಕ ನೂತನ ಸಚಿವರಿಗೆ ರಾಜ್ಯಪಾಲರು ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರಗೆ ಸಚಿವ ಸ್ಥಾನ
























