ಅಜೆಕಾರು ಜ್ಞಾನಸುಧಾದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ : ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಲಯದ ಸಹಯೋಗದೊಂದಿಗೆ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಜೂ. 5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು.
ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಡಿ.ಎನ್. ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭೂಮಿಯ ತಾಪಮಾನ ದಿನೇ ದಿನೆ ಏರಿಕೆಯಾಗುತ್ತಿರುವುದು ಆತಂಕದ ವಿಚಾರ. ಅರಣ್ಯ, ಪರಿಸರ ನಾಶವೇ ಇದಕ್ಕೆ ಮೂಲ ಕಾರಣ. ಮುಂದಿನ ಪೀಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತಾಗಲು ಪರಿಸರ ರಕ್ಷಣೆಯಲ್ಲಿ ನಾವೆಲ್ಲರೂ ಪಾಲ್ಗೊಳ್ಳುವುದು ಅತಿ ಅವಶ್ಯವೆಂದರು.
ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ರವೀಂದ್ರ ಪಿ. ಆಚಾರ್ಯ ಹಾಗೂ ಸಾಮಾಜಿಕ ಅರಣ್ಯ ವಲಯದ ಉಪ ವಲಯ ಅರಣ್ಯಾಧಿಕಾರಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು.
ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಸಂತೋಷ್ ಅವರು ಮಕ್ಕಳಿಗೆ ಪರಿಸರದ ಮಹತ್ವದ ಕುರಿತು ತಿಳಿಸಿ, ಪರಿಸರದಲ್ಲಿ ಎಲ್ಲಾ ಜೀವಿಗಳಿಗೂ ಬದುಕುವ ಸಮಾನ ಹಕ್ಕಿದೆ. ಪ್ರತಿಯೋರ್ವರು ಪ್ರತಿ ವರ್ಷ ಕನಿಷ್ಠ ಒಂದು ಗಿಡ ನೆಟ್ಟು ಅದರ ಪೋಷಣೆ ಮಾಡಬೇಕೆಂದರು. ಉಪ ಪ್ರಾಂಶುಪಾಲೆ ಆರತಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪರಿಸರ ಜಾಗೃತಿಯ ಸಂದೇಶ ಸಾರುವ ಕಿರು ಪ್ರಹಸನವನ್ನು ಪ್ರದರ್ಶಿಸಿ, ಪರಿಸರ ಸಂರಕ್ಷಣೆಯ ಕುರಿತ ಸಮೂಹ ಗೀತೆಯನ್ನು ಹಾಡಿದರು. ಸಮಾಜ ವಿಜ್ಞಾನ ಶಿಕ್ಷಕಿ ಆಶಾ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.















































































































































error: Content is protected !!
Scroll to Top