ಕಾರ್ಕಳ : ಹೆರ್ಮುಂಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ನಿವೃತ್ತ ಮುಖ್ಯ ಶಿಕ್ಷಕ ಉದಯ ಶೆಟ್ಟಿ ಬಿ. ಅವರಿಗೆ ಅಭಿನಂದನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಶಾಲಾ ಹಳೆ ವಿದ್ಯಾರ್ಥಿ ಶಿವರಾಜ್ ಹೆಗ್ಡೆ ಅವರನ್ನು ಅಭಿನಂದಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಾನಿಗಳಾದ ವಿವೇಕಾನಂದ ಭಟ್, ಆದರ್ಶ ಭಟ್, ತರುಣ ಭಾರತ ಚಾರಿಟೇಬಲ್ ಟ್ರಸ್ಟಿನ ಸಂಚಾಲಕ ಸತೀಶ್ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಜನ್ ನಾಯಕ್, ಕಾರ್ಯದರ್ಶಿ ಉದಯ ಕುಲಾಲ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶ್ರೀಕಾಂತ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಕ್ಷಕಿಯರಾದ ಅಶ್ವಿನಿ ಶೆಟ್ಟಿ, ಶ್ರುತಿ, ಲತಾ ಹೆಗ್ಡೆ, ಮೋನಿಕ ಸಹಕರಿಸಿದರು.
ಹೆರ್ಮುಂಡೆ ಶಾಲಾ ಪ್ರಾರಂಭೋತ್ಸವ - ನಿವೃತ್ತ ಶಿಕ್ಷಕರಿಗೆ ಅಭಿನಂದನೆ
























