ಇಂದು ಕೆಸಿಇಟಿ ಫಲಿತಾಂಶ ಪ್ರಕಟ – ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ

ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವು ಇಂದು (ಜೂ. 6) ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಾಗೂ ಟಾಪರ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

2 ಗಂಟೆಯ ನಂತರ ರಿಸಲ್ಟ್ ಲಭ್ಯ:
ಸುದ್ದಿಗೋಷ್ಠಿ ಮುಗಿದ ಬಳಿಕ ಮಧ್ಯಾಹ್ನ 2 ಗಂಟೆಯ ನಂತರ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಫಲಿತಾಂಶ ಹಾಗೂ ರ‍್ಯಾಂಕ್ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಒಂದೇ ಬಾರಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್ ಆಗುವುದರಿಂದ ಸರ್ವರ್ ನಿಧಾನವಾಗುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೊಂಚ ಸಮಯ ಕಾಯ್ದು ಪರ್ಯಾಯ ಲಿಂಕ್‌ಗಳ ಮೂಲಕ ಪ್ರಯತ್ನಿಸಬೇಕಾಗಿ ವಿನಂತಿಸಲಾಗಿದೆ.































































































error: Content is protected !!
Scroll to Top