ಗೃಹಮಂತ್ರಿಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಕೆರ್ವಾಶೆ ಮೂಲದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ

ಕಾರ್ಕಳ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಕಾರ್ಕಳ ಕೆರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಫೇಸ್‌ಬುಕ್‌ ಖಾತೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್‌ ಇನ್ನು ಎರಡು ವರ್ಷಗಳ ಅವಧಿ ಕೋಮುವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ ಸಚಿವರಿಲ್ಲ’ ಎಂಬ ಪ್ರಿಯಾಂಕ್‌ ಖರ್ಗೆ ಅವರ ಹೇಳಿಕೆಯನ್ನು ಫೋಸ್ಟ್ ಮಾಡಲಾಗಿತ್ತು. ಪೋಸ್ಟ್‌ಗೆ ಸುಧೀರ್ ಬಂಗೇರ ಎಂಬಾತ ಜೂ. 6ರಂದು ಕಮೆಂಟ್ ಹಾಕಿದ್ದರು. ಈ ಬಗ್ಗೆ ನಿಟ್ಟೆ ಅತ್ತೂರಿನ ಸುರೇಶ ಚೇತನಹಳ್ಳಿ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬೇರೆ ಬೇರೆ ಗುಂಪುಗಳ ನಡುವೆ ವೈರತ್ವ, ದ್ವೇಷ ಹಾಗೂ ಅವಮಾನ ಮೂಡಿಸುವ ಕಮೆಂಟ್ ಬರೆದು ಸಾಮಾಜಿಕ ಶಾಂತಿಯನ್ನು ಕದಡುವ ಉದ್ದೇಶದಿಂದ ರಾಜ್ಯದ ಗೃಹ ಮಂತ್ರಿಯವರು ದಲಿತ ಜಾತಿಗೆ ಸೇರಿದವರೆಂದು ತಿಳಿದರೂ ಅವರ ಜಾತಿಗೆ ಅವಹೇಳನ ಮಾಡುವ ರೀತಿಯಲ್ಲಿ ಸುಧೀರ ಬಂಗೇರ ಕಮೆಂಟ್ ಹಾಕಿರುತ್ತಾರೆ. ದಲಿತ ಮಂತ್ರಿಯವರಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಲಾಗಿದೆ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸುಧೀರ್‌ ವಿರುದ್ಧ ಅಪರಾಧ ಕ್ರಮಾಂಕ 82/2026 ಕಲಂ. 351(3), 196, 353(2)BNS ಹಾಗೂ 3(1) (r) (u) SC/ST Act ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಪ್ರಕರಣದ ಆರೋಪಿ ಸುಧೀರ ಬಂಗೇರನನ್ನು ಆತನ ಮಿಯ್ಯಾರಿನ ಮನೆಯಿಂದ ಜೂ. 7ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸುಧೀರ ಬಂಗೇರ ಅವನಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

































































































error: Content is protected !!
Scroll to Top