ಹೆಬ್ರಿ : ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಜೂ. 7ರಂದು ಹೆಬ್ರಿ ಶಿವಪುರದಲ್ಲಿ ನಡೆದಿದೆ. ವಿಜಯ ಶೆಟ್ಟಿ (52) ಮೃತ ವ್ಯಕ್ತಿ. ಇವರು 2 ವರ್ಷಗಳಿದ ಬಿಪಿ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಯಲ್ಲಿದ್ದರು. ಆದಿತ್ಯವಾರ ರಾತ್ರಿ 7:30ಕ್ಕೆ ಮನೆಯಲ್ಲಿ ಹಠಾತ್ತಾಗಿ ಕುಸಿದು ಬಿದ್ದಿದ್ದು ಅವರನ್ನು ಚಿಕಿತ್ಸೆಗಾಗಿ ಹೆಬ್ರಿಯ ರಾಘವೇಂದ್ರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ರಿಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಪರೀಕ್ಷಿಸಿ ಈಗಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತರು ಹೃದಯಾಘಾತದಿಂದ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕುಸಿದು ಬಿದ್ದು ವ್ಯಕ್ತಿ ಸಾವು
























