ಕಾರ್ಕಳ : ಶ್ರೀ ಆನಂದ ಶೆಟ್ಟಿ ಸರಕಾರಿ ಪ್ರೌಢಶಾಲೆ ಕಣಜಾರು ಇಲ್ಲಿ ಜೂ.9ರಂದು ಹಳೆವಿದ್ಯಾರ್ಥಿಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ವಿತರಣಾ ಕಾರ್ಯಕ್ರಮ ಹಾಗೂ ಲಯನ್ಸ್ ವಲಯಾಧ್ಯಕ್ಷ ಪ್ರಶಾಂತ್ ಶೆಟ್ಟಿ ಗುತ್ತುಮನೆ ಬೈಲೂರು ಇವರಿಂದ ಶಾಲೆಗೆ ಫ್ಯಾನ್ ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ ದಾಖಲಾಗಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಅಭಿನಂದಿಸಲಾಯಿತು.
ಶ್ರೀ ಬ್ರಹ್ಮಲಿಂಗೇಶ್ವರ ಚಾರಿಟೇಬಲ್ ಟ್ರಸ್ಟ್ ಕಣಜಾರು ಇದರ ಅಧ್ಯಕ್ಷ ವಿಕ್ರಂ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅವಿನಾಶ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷೆ ಶೋಭಾ ಆಚಾರ್ಯ, ಸಂಘ ಮಾಜಿ ಅಧ್ಯಕ್ಷ ಉದಯ ನಾಯ್ಕ್, ಸ್ಥಾಪಕಾಧ್ಯಕ್ಷ ಸುಧಾಕರ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕಿ ನವೀನ ಕುಮಾರಿ ಉಪಸ್ಥಿತರಿದ್ದರು. ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಂಜಿತ್ ಶೆಟ್ಟಿ ಕೌಡೂರು ಸ್ವಾಗತಿಸಿದರು. ಅಧ್ಯಕ್ಷ ಕಿಶೋರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಸ್ಕರ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವಿಶ್ವೇಶ್ ದೇವಾಡಿಗ ವಂದಿಸಿದರು. ಡೆನಿಸ್ ಸಿಪ್ರಿಯಾನ್ ಮಾರ್ಟಿಸ್, ಸಂಧ್ಯಾ, ಪ್ರಜ್ಞಾ ಸಹಕರಿಸಿದರು.































































