ಕಾರ್ಕಳ : ತಾಲೂಕು ಪಂಚಾಯತ್ ಮಾಜಿ ಸದಸ್ಯ, ಉದ್ಯಮಿ, ಹೊಸ್ಮಾರಿನ ಪ್ರೇಮ್ ಕುಮಾರ್ ಜೈನ್ (65) ಜೂ. 9ರ ಮುಂಜಾನೆ ನಿಧನ ಹೊಂದಿದರು. ಅಣ್ಣಾಜೇರ್ ಎಂದೇ ಕರೆಸಿಕೊಳ್ಳುತ್ತಿದ್ದ ಪ್ರೇಮ್ ಕುಮಾರ್ ಅವರು ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದು ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿದ್ದರು. ಸ್ಥಳೀಯ ದೇವಸ್ಥಾನ, ಬಸದಿ, ದೈವಸ್ಥಾನ, ಶಾಲಾ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಶಾಸಕ ಸುನಿಲ್ ಸಂತಾಪ
ಪ್ರೇಮ್ ಕುಮಾರ್ ನಿಧನಕ್ಕೆ ಶಾಸಕ ವಿ. ಸುನಿಲ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೇಮ್ ಕುಮಾರ್ ಜೈನ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಅಣ್ಣಾಜೇರ್ ಎಂದು ಜನಾನುರಾಗಿ, ಯಶಸ್ವಿ ಉದ್ಯಮಿಯಾಗಿ, ಕೃಷಿಕರಾಗಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ಸೇವೆ ಅವಿಸ್ಮರಣೀಯ ಎಂದಿರುವ ಸುನಿಲ್ ಕುಮಾರ್ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅಗಲಿಕೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.






































































