ರಾಜ್ಯ ಸರಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು : ವಿ. ಸುನಿಲ್ ಕುಮಾರ್

ಕಾರ್ಕಳ : ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಅವರು ಹೊಸ್ಮಾರಿನ ಶ್ರೀ ಭಗವತಿ ಕಾಂಪ್ಲೆಕ್ಸ್‌ನಲ್ಲಿ ನಡೆದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು. ಪಕ್ಷ ಸಂಘಟನೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆಯೂ ಇದೇ ಸಂದರ್ಭದಲ್ಲಿ ನವೀನ್‌ ನಾಯಕ್‌ ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷ ಜಯವರ್ಮ ಜೈನ್ ಮಾಪಾಲು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬೋಳ ಸತೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದಿವ್ಯ ಗಿರೀಶ್ ಅಮಿನ್, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ ಹಾಗೂ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮಂಜುಳ ವಿಶ್ವನಾಥ್ ಮೊದಲಾದವರು ಉಪಸ್ಥಿತರಿದ್ದರು.

















































error: Content is protected !!
Scroll to Top