ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂ. 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆಯಲಿದ್ದಾರೆ. ಅಂದು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. 3 ಗಂಟೆ ಸುಮಾರಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದೇವರ ದರ್ಶನ ಪಡೆದು, ಮತ್ತೆ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮರಳಲಿದ್ದಾರೆ. ಬಳಿಕ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ.
ಜೂ. 12 : ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ









